ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಎರಡು ಲಕ್ಷ ಕೋಟಿ ರೂಪಾಯಿಗೂ ಅಧಿಕ ಸರಕು ಮತ್ತು ಸೇವಾ ತೆರಿಗೆ(GST) ಸಂಗ್ರಹವಾಗಿ ಹೊಸ ದಾಖಲೆ ನಿರ್ಮಾಣವಾಗಿದೆ.
ಏಪ್ರಿಲ್ ನಲ್ಲಿ ಬರೋಬ್ಬರಿ 2.10 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಈ ಮೂಲಕ ಮೊದಲ ಬಾರಿಗೆ ಎರಡು ಲಕ್ಷ ಕೋಟಿ ಮೈಲುಗಲ್ಲನ್ನು ದಾಟಿದೆ. 2023ರ ಏಪ್ರಿಲ್ ನಲ್ಲಿ 1.87 ಲಕ್ಷ ಕೋಟಿ ರೂ. ಸಂಗ್ರಹವಾಗಿದ್ದು, ಇದುವರೆಗೆ ದಾಖಲೆಯಾಗಿತ್ತು. ವರ್ಷದಿಂದ ವರ್ಷಕ್ಕೆ ಜಿಎಸ್‌ಟಿ ಬೆಳವಣಿಗೆ ದರ ಶೇ. 12.4 ರಷ್ಟು ಹೆಚ್ಚಳ ಆಗಿದೆ. ದೇಶದಲ್ಲಿ ಮೊದಲ ಬಾರಿಗೆ ಎರಡು ಲಕ್ಷ ಕೋಟಿ ರೂ.ಗೂ ಅಧಿಕ ಜಿಎಸ್‌ಟಿ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.