ನವದೆಹಲಿ: ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ(ರೇರಾ) ಜಿಎಸ್ಟಿ ವಿನಾಯಿತಿ ನೀಡಲಾಗಿದೆ. ಜಿ.ಎಸ್.ಟಿ. ಮಂಡಳಿ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿ, ರೇರಾಗಳಿಗೆ ಆಯಾ ರಾಜ್ಯ ಸರ್ಕಾರಗಳು ಹಣ ನೀಡುತ್ತವೆ. ಹೀಗಾಗಿ ಪ್ರಾಧಿಕಾರಗಳಿಗೆ ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರಗಳಿಗೆ ತೆರಿಗೆ ವಿಧಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಂಚಾಯಿತಿಗಳ ಅಧಿಕಾರ ಮತ್ತು ಹೊಣೆಗಾರಿಕೆ ವಿಚಾರದಲ್ಲಿ ಸಂವಿಧಾನದ 243ಜಿ ಪರಿಚ್ಚೇದದ ವ್ಯಾಪ್ತಿಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಬರುತ್ತದೆ. ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಪಾರದರ್ಶಕತೆ ಗ್ರಾಹಕರ ಹಿತರಕ್ಷಣೆ ವಿವಾದಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯಗಳಲ್ಲಿ ರೇರಾ ಸಂಸ್ಥೆ ಸ್ಥಾಪನೆ ಮಾಡಲಾಗಿದೆ. ರೇರಾ ಕಾರ್ಯ ವಿಧಾನದ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದ ನಂತರ ಜಿ.ಎಸ್.ಟಿ. ಅನ್ವಯವಾಗುವುದಿಲ್ಲ ಎಂದು ನಿರ್ಧರಿಸಲಾಗಿದೆ.