alex Certify ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿಗೆ ನೀಡಿ ಸಹಿ ಮಾಡಿದ್ದ ಸಿ.ಎಂ. ಇಬ್ರಾಹಿಂ: ಜಿ.ಟಿ. ದೇವೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿಗೆ ನೀಡಿ ಸಹಿ ಮಾಡಿದ್ದ ಸಿ.ಎಂ. ಇಬ್ರಾಹಿಂ: ಜಿ.ಟಿ. ದೇವೇಗೌಡ

ಬೆಂಗಳೂರು: ಬಿಜೆಪಿ -ಜೆಡಿಎಸ್ ಮೈತ್ರಿ ಕುರಿತಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಮಾಹಿತಿ ಇತ್ತು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಪಿ ನಗರದಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಬಗ್ಗೆ ನಡೆದ ಮಾತುಕತೆ ಸಂದರ್ಭದಲ್ಲಿ ಮೈತ್ರಿ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೆಗೆದುಕೊಂಡ ನಿರ್ಧಾರಕ್ಕೆ ಇಬ್ರಾಹಿಂ ಸಹಿ ಮಾಡಿ ಒಪ್ಪಿಗೆ ನೀಡಿದ್ದರು ಎಂದು ತಿಳಿಸಿದ್ದಾರೆ.

ಎಲ್ಲಾ ಮುಖಂಡರು, ಶಾಸಕರ ಸಭೆ ಕರೆದಾಗ ಸಿ.ಎಂ. ಇಬ್ರಾಹಿಂ ಜೊತೆಗಿದ್ದರು. ಮಾತ್ರವಲ್ಲ, ಏನೇ ತೀರ್ಮಾನ ಕೈಗೊಂಡರೂ ನಿಮ್ಮ ಜೊತೆಗೆ ಇರುತ್ತೇವೆ ಎಂದು ಹೇಳಿದ್ದರು. ಅಧಿಕಾರ ಶಾಶ್ವತವಾಗಿರಲು ಅಧಿಕಾರ ಹಂಚಿಕೆ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರು. ಸಿಎಂ ಇಬ್ರಾಹಿಂ ಅವರೊಂದಿಗೆ ಹೆಚ್.ಡಿ. ದೇವೇಗೌಡರು ಮಾತನಾಡುತ್ತಾರೆ ಎಂದು ಜಿಟಿಡಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...