
ಮೈಸೂರು: ಮೊಮ್ಮಗಳ ಅಗಲಿಕೆಯ ದುಃಖದಲ್ಲಿರುವ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಜಿ.ಟಿ. ದೇವೇಗೌಡರ ಪುತ್ರ ಜಿ.ಟಿ. ಹರೀಶ್ ಗೌಡ ಅವರ ಪುತ್ರಿ ಗೌರಿ(3) ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನ ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಸಾ.ರಾ. ಮಹೇಶ್, ಪುಟ್ಟರಾಜು, ಅನ್ನದಾನಿ ಮೊದಲಾದವರು ಸಾಂತ್ವನ ಹೇಳಿದ್ದಾರೆ.