ಬೆಳಗಾವಿ: ಜೆಡಿಎಸ್ ವಿರುದ್ಧ ಬೆಳಗಾವಿಯಲ್ಲಿ ಪಕ್ಷದ ಶಾಸಕ ಜಿ.ಟಿ. ದೇವೇಗೌಡ ವಾಗ್ದಾಳಿ ನಡೆಸಿದ್ದು, ನನಗೆ ಪಕ್ಷದ ಬಾಗಿಲು ಮುಚ್ಚಿದೆ ಎಂದು ಹೇಳುತ್ತಾರೆ. ಇತ್ತೀಚಿನ ಸಭೆಗಳಿಗೆ ನನಗೆ ಆಹ್ವಾನ ನೀಡಿಲ್ಲ ಎಂದು ತಿಳಿಸಿದ್ದಾರೆ.
ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಗೊಂದಲ ಇತ್ತು. ಜೆಡಿಎಸ್ ಸ್ಪಷ್ಟ ನಿಲುವು ತೆಗೆದುಕೊಳ್ಳಲಿಲ್ಲ. ಸ್ಥಳೀಯ ನಾಯಕರ ತೀರ್ಮಾನಕ್ಕೆ ಬಿಟ್ಟರು. ಇದರಿಂದ ಜೆಡಿಎಸ್ ನಾಯಕರಿಗೆ ಹಿನ್ನಡೆಯಾಯಿತು. ಬಿಜೆಪಿ ಇಲ್ಲವೇ ಕಾಂಗ್ರೆಸ್ ಗೆ ಹೋಗುತ್ತೇವೆ ಅನ್ನಬೇಕು. ಎರಡು ಕಡೆ ಇದ್ದರೆ ಪಕ್ಷದ ಕಾರ್ಯಕರ್ತರಿಗೆ ಗೊಂದಲವಾಗುತ್ತದೆ. ಕೋನರೆಡ್ಡಿ ಕೂಡ ಸೂಕ್ತ ಸ್ಥಾನಮಾನ ಸಿಗದೆ ಪಕ್ಷವನ್ನು ಬಿಡುತ್ತಿದ್ದಾರೆ ಎಂದು ಜೆಡಿಎಸ್ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.