
ಮೈಸೂರು: ಜೆಡಿಎಸ್ ನಾಯಕರ ವಿರುದ್ಧ ಶಾಸಕ ಜಿ.ಟಿ. ದೇವೇಗೌಡರ ಮುನಿಸು ಮುಂದುವರೆದಿದೆ. ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಕರೆದ ಸಭೆಗೆ ಅವರು ಗೈರುಹಾಜರಾಗಿದ್ದಾರೆ.
ಶಾಸಕಾಂಗ ಪಕ್ಷದ ನಾಯಕ ಸ್ಥಾನ ನೀಡದಿರುವುದಕ್ಕೆ ಜಿ.ಟಿ. ದೇವೇಗೌಡ ಮುನಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆಯುತ್ತಿರುವ ಕಾರ್ಯಕರ್ತರ ಸಭೆಯಿಂದ ದೂರ ಉಳಿದಿದ್ದಾರೆ. ಎಲ್ಲಾ ಶಾಸಕರು, ಮಾಜಿ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೆ, ಸಭೆಗೆ ಗೈರುಹಾಜರಾದ ಜಿಟಿಡಿ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡರು ಶಾಸಕಾಂಗ ನಾಯಕನ ಸ್ಥಾನದ ಆಕಾಂಕ್ಷಿಯಾಗಿದ್ದರು.