alex Certify ‘ನನಗೆ, ಮಗನಿಗೆ ಟಿಕೆಟ್ ಕೊಟ್ಟರೆ ಮಾತ್ರ ಕಾಂಗ್ರೆಸ್ ಸೇರ್ಪಡೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನನಗೆ, ಮಗನಿಗೆ ಟಿಕೆಟ್ ಕೊಟ್ಟರೆ ಮಾತ್ರ ಕಾಂಗ್ರೆಸ್ ಸೇರ್ಪಡೆ’

ಮೈಸೂರು: ಯಾವ ಕ್ಷೇತ್ರದಲ್ಲಿ ಪುತ್ರ ಹರೀಶ್ ಗೌಡರಿಗೆ ಟಿಕೆಟ್ ನೀಡುತ್ತಾರೆ ಎನ್ನುವುದು ಖಚಿತವಾದ ನಂತರ ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮತ್ತು ಮಗ ಹರೀಶ್ ಗೌಡರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಕೇಳಿದ್ದೇನೆ ಎಂದು ಕಾಂಗ್ರೆಸ್ ಸೇರುವ ಬಗ್ಗೆ ಷರತ್ತು ಹಾಕಿದ್ದಾರೆ.

ಹರೀಶ್ ಗೌಡ ಅವರಿಗೆ ಟಿಕೆಟ್ ನೀಡುವ ಬಗ್ಗೆ ಮೊದಲು ತೀರ್ಮಾನವಾಗಬೇಕು. ಹುಣಸೂರು, ಕೆಆರ್ ನಗರ, ಚಾಮರಾಜ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಹರೀಶ್ ಗೌಡರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು. ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಗೆ ಬರುವಂತೆ ಆ ಪಕ್ಷದ ನಾಯಕರು ಕೂಡ ಆಹ್ವಾನಿಸಿದ್ದಾರೆ. ನನಗೆ ಹಾಗೂ ಪುತ್ರನಿಗೆ ಟಿಕೆಟ್ ನೀಡುವ ಭರವಸೆ ಕೂಡ ನೀಡಿದ್ದಾರೆ. ಆದರೆ, ಇದುವರೆಗೆ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...