alex Certify ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ : ವಾಹನ ಸವಾರರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ : ವಾಹನ ಸವಾರರ ಪರದಾಟ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಸಾರ್ವಜನಿಕರು,ವಾಹನ ಸವಾರರು ಪರದಾಡುವಂತಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬಿಟ್ಟು ಬಿಡೆದೆ ಮಳೆಯಾಗುತ್ತಿದೆ. ಬೆಂಗಳೂರು, ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಶುರುವಾಗಿದ್ದು, ಮಳೆಯಿಂದಾಗಿ ಕಚೇರಿ ಕೆಲಸಕ್ಕೆ ಹೋಗುವವರು, ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ವರುಣಾರ್ಭಟ ಮುಂದುವರೆದಿದ್ದು, ಬೆಂಗಳೂರು, ಚಿತ್ರದುರ್ಗ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆಯಾಗುತ್ತಿದೆ.

ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...