alex Certify ಎಸ್.ಎಂ. ಕೃಷ್ಣ ನಿಧನ ಹಿನ್ನೆಲೆ ಜಿಟಿಟಿಸಿ ನೇಮಕಾತಿ ಪರೀಕ್ಷೆ ಡಿ. 12ಕ್ಕೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಎಂ. ಕೃಷ್ಣ ನಿಧನ ಹಿನ್ನೆಲೆ ಜಿಟಿಟಿಸಿ ನೇಮಕಾತಿ ಪರೀಕ್ಷೆ ಡಿ. 12ಕ್ಕೆ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ 11ರಂದು ಸರ್ಕಾರಿ ರಜೆ ಘೋಷಿಸಿದೆ. ಈ ಕಾರಣದಿಂದಾಗಿ ಇಂದು ನಡೆಯಬೇಕಿದ್ದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಜಿಟಿಟಿಸಿ ನೇಮಕಾತಿ ಪರೀಕ್ಷೆಯನ್ನು ಡಿಸೆಂಬರ್ 12ರಂದು ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಡಿಸೆಂಬರ್ 12ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12:30 ರವರೆಗೆ ಪತ್ರಿಕೆ -1, ಮಧ್ಯಾಹ್ನ 2:30 ರಿಂದ ಸಂಜೆ 4.30 ರವರೆಗೆ ಪತ್ರಿಕೆ -2 ಪರೀಕ್ಷೆ ನಡೆಯಲಿದೆ. ಉಳಿದಂತೆ ಡಿಸೆಂಬರ್ 14ರ ಪರೀಕ್ಷಾ ವೇಳಾಪಟ್ಟಿಯಲ್ಲಿ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಹೇಳಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...