ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರದಂತೆ ಬಿಜೆಪಿಯು ಆರಂಭಿಕ ಮುನ್ನಡೆ ಪಡೆದಿದೆ.
ಎಎಪಿ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ 27 ವರ್ಷಗಳ ನಂತರ ಬಿಜೆಪಿ ಸರ್ಕಾರ ರಚಿಸುತ್ತದೆಯೇ ಎಂಬುದು ಮಧ್ಯಾಹ್ನದ ವೇಳೆಗೆ ಗೊತ್ತಾಗಲಿದೆ. ದೆಹಲಿಯ ಗದ್ದುಗೆಯಲ್ಲಿ ಬಿಜೆಪಿಯನ್ನು ಪ್ರತಿಷ್ಠಾಪಿಸಲು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಸಾಕಷ್ಟು ಕಸರತ್ತು ನಡೆಸಿದ್ದರು.
ಬೆಳಗ್ಗೆ 10 ಗಂಟೆ ಸುಮಾರಿಗೆ ಬಿಜೆಪಿ ಮ್ಯಾಜಿಕ್ ನಂಬರ್ ತಲುಪಿದೆ. ಬಿಜೆಪಿ 40, ಎಎಪಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ . ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಈ ಬಾರಿ ದೆಹಲಿಯಲ್ಲಿ ತನ್ನ ಖಾತೆಯನ್ನು ತೆರೆದಿದೆ. ಹೀಗೆ ಬಿಜೆಪಿ ಮುನ್ನಡೆ ಕಾಯ್ದುಕೊಂಡರೆ ಸುದೀರ್ಘ 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ.
ಸದ್ಯ ಬಿಜೆಪಿ ಪಾಳ್ಯದಲ್ಲಿ ಸಂತಸ ಮನೆ ಮಾಡಿದ್ದು ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.