ಬೆಂಗಳೂರು: ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆಯೇ ಎಂಬುದರ ಬಗ್ಗೆ ಪರಿಶೀಲಿಸಲು ಕಾಂಗ್ರೆಸ್ ಪಕ್ಷದಿಂದ ಸಮಿತಿ ರಚಿಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಂಸ್ಥಾಪನ ದಿನವಾದ ನವೆಂಬರ್ 28ರಂದು ಸಮಿತಿಗೆ ಚಾಲನೆ ನೀಡಲಾಗುವುದು. ಪ್ರತಿ ಮನೆಗೂ ಕಾರ್ಯಕರ್ತರು ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಸಮಸ್ಯೆ ಮತ್ತು ಆಗಬೇಕಿರುವ ತಿದ್ದುಪಡಿಯ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳು ಮನೆಮನೆಗೆ ತಲುಪಿವೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್ ಪಡೆಯುವ ಕಾನೂನು ತರುತ್ತಾರೆ ಎನ್ನುವ ವಿಚಾರವನ್ನು ಜನರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನವರಿಕೆ ಮಾಡಿಕೊಡಬೇಕು ಎಂದು ಕರೆ ನೀಡಿದ್ದಾರೆ.