ಮೈಸೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದೆ. ಈ ನಡುವೆ ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್, ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಂಜನಗೂಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷವರ್ಧನ್, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಾಯಿಮಾಂಸಕ್ಕೆ ಹೋಲಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಗೂಂಡಾಗಿರಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಿದ್ದರಾಮಯ್ಯ ಹೇಳುವುದು ಒಂದು ಮಾಡುವುದು ಒಂದು ಎಂದು ಕಿಡಿಕಾರಿದ್ದಾರೆ.
ಗ್ಯಾರಂಟಿ ಯೋಜನೆಗಳು ನಾಯಿಮಾಂಸ ನೀಡುತ್ತಿರುವಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮಜೈ ಶಾಸಕ ಹರ್ಷವರ್ಧನ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿವೆ.