ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜಭವನದ ನಡುವೆ ಸಂಘರ್ಷದ ನಡುವೆಯೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಶ್ಲಾಘಿಸಿದ್ದಾರೆ.
78ನೇ ಸ್ವಾಂತಂತ್ರ್ಯೋತ್ಸವದ ತಮ್ಮ ಸಂದೇಶದಲ್ಲಿ ರಾಜ್ಯಪಾಲ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬದವರಿಗೆ ಸಹಕಾರಿಯಾಗಿವೆ. ಆರ್ಥಿಕ ಸಬಲೀಕರಣಕ್ಕೆ, ನಿರುದ್ಯೋಗಿ ಯುವಕರಿಗೆ ಸಹಾಯವಾಗಿದೆ ಎಂದು ಗುಣಗಾನ ಮಾಡಿದ್ದಾರೆ.
ಸರ್ಕಾರದಿಂದ ಐದು ಖಾತರಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಅಭಿವೃದ್ಧಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಭಿನ್ನ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದು ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಶ್ಲಾಘಸಿದ್ದಾರೆ.
ಕರ್ನಾಟಕ ಹಲವು ಅಭಿವೃದ್ಧಿಗೆ ಸಾಕ್ಷಿಯಾಗಿದೆ. ಅಲ್ಲದೇ ದೇಶದ ಆರ್ಥಿಕ ಅಭಿವೃದ್ಧಿಗೂ ಕೊಡುಗೆ ನೀಡಿದೆ. ರಾಜ್ಯದ ಗ್ಯಾರಂಟಿ ಯೋಜನೆಗಳು ಇತರ ರಾಜ್ಯಗಳಿಗೂ ಮಾದರಿಯಾಗಿವೆ ಎಂದು ಹೇಳಿದ್ದಾರೆ.