ನವದೆಹಲಿ: ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಪರಿಷ್ಕರಣೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಚಿವ ಮುನಿಯಪ್ಪ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಪಡಿತರ ಚೀಟಿ ಹೊಂದಿದವರಿಗೆ ಮತ್ತು ಗೃಹಜ್ಯೋತಿ ಬಳಸುವ ಅರ್ಹರಿಗೆ ಮಾತ್ರ ಸೌಲಭ್ಯ ಕಲ್ಪಿಸಲು ಪರಿಷ್ಕರಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ಯಾವುದೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಾದ ಅನುದಾನ ಮೀಸಲಿಡಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಜೊತೆಗೆ ಅಭಿವೃದ್ಧಿ ಯೋಜನೆಗಳನ್ನು ಕೂಡ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ 4.5 ಕೋಟಿ ಜನರಿಗೆ ಅನುಕೂಲವಾಗುತ್ತಿದೆ. ಎಪಿಎಲ್ ಪಡಿತರ ಚೀಟಿದಾರರಿಗೂ ಕೆಜಿಗೆ 15 ರೂ. ದರದಲ್ಲಿ ಒಂದು ಕುಟುಂಬಕ್ಕೆ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಪಡಿತರ ಚೀಟಿಗಾಗಿ ಸಲ್ಲಿಕೆಯಾದ 2.95 ಲಕ್ಷ ಅರ್ಜಿಗಳ ವಿಲೇವಾರಿ ಮಾಡಲು ಪರಿಷ್ಕರಣೆ ನಡೆಸಲಾಗಿದ್ದು, 2.38 ಲಕ್ಷ ಅರ್ಜಿಗಳು ಬಿಪಿಎಲ್ ಗೆ ಒಳಪಡುತ್ತವೆ. ಉಳಿದ ಅರ್ಜಿಗಳು ಎಪಿಎಲ್ ಗೆ ಒಳಪಡುತ್ತವೆ ಎಂದು ಹೇಳಿದ್ದಾರೆ.