ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ. ಆರ್ ಅಶೋಕ್ ಅವರೇ, ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ. ಆರ್ ಅಶೋಕ್ ಅವರೇ, ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ. ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ, ಅದು ನಮ್ಮ ಬದ್ಧತೆ ಮತ್ತು ರಾಜ್ಯದ ಜನರ ಮೇಲಿನ ಕಾಳಜಿ.
ಕೇಂದ್ರ ಸರ್ಕಾರದ ದುರಾಡಳಿತದಿಂದ ನೆಲ ಹಿಡಿದಿರುವ ಜನತೆಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೇಂದ್ರದ ಸರ್ಕಾರಿ ಯಂತ್ರದ ದುರುಪಯೋಗ, ನಾಮ ಬಲ, ಅಪಾರವಾದ ಸಂಪನ್ಮೂಲಗಳ ಹೊರತಾಗಿಯೂ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.