![](https://kannadadunia.com/wp-content/uploads/2023/11/Santhosh-Lad.jpg)
ಬಳ್ಳಾರಿ : ಲೋಕಸಭೆ ಚುಣಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂಬುದು ಸುಳ್ಳು. ಮುಂದಿನ ಐದು ವರ್ಷಗಳವರೆಗೆ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಹೋದರೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಹಲವು ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್ ಲಾಡ್ ಇದೆಲ್ಲಾ ಸುಳ್ಳು ಮುಂದಿನ ಐದು ವರ್ಷಗಳವರೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸ್ಪಷ್ಟ ಪಡಿಸಿದರು.
ಸಂಸದ ಡಿ.ಕೆ ಸುರೇಶ್ ಅವರು ರಾಜ್ಯಕ್ಕೆ ಬರಬೇಕಾದ ತೆರಿಗೆ ಕುರಿತು ಮಾತನಾಡಿದ್ದಾರೆ. ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ ಡಿ.ಕೆ. ಸುರೇಶ್ ಅವರನ್ನು ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ. ನಟಿ ಕಂಗನಾ ಭಿಕ್ಷೆಯಿಂದ ಸ್ವಾತಂತ್ರ್ಯ ಬಂದಿದೆ ಅಂತ ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಆಗಲೇ ಇಲ್ಲ ಎಂದರು.