ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಹೊತ್ತಲ್ಲೇ ಅನರ್ಹ ಪಡಿತರ ಚೀಟಿದಾರರಿಗೆ ಗ್ಯಾರಂಟಿ ಶಾಕ್ ಕಾದಿದೆ.
ಹೌದು, ಸುಳ್ಳು ಮಾಹಿತಿ ನೀಡಿರ ಪಡಿತರ ಚೀಟಿ ಪಡೆದವರ ವಿರುದ್ಧ ಕ್ರಮಕ್ಕೆ ಆಹಾರ ಇಲಾಖೆ ಮುಂದಾಗಿದ್ದು,ಇದೀಗ ರಾಜ್ಯಾದ್ಯಂತ 4 ಲಕ್ಷಕ್ಕೂ ಹೆಚ್ಚು ಅನರ್ಹ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಹೇಳಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿ ಸರ್ಕಾರಿ ಯೋಜನೆಗಳನ್ನು ಪಡೆಯಲು ಹೊರಟಿದ್ದ ನಾಗರಿಕರ ಮೇಲೆ ಆಹಾರ ಇಲಾಖೆಯು ಹದ್ದಿನ ಕಣ್ಣಿಟ್ಟಿದೆ. ಆಹಾರ ಇಲಾಖೆಯು ಈಗಾಗಲೇ ಸರ್ವೇ ನಡೆಸಿ 4.59 ಲಕ್ಷ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ನಿರ್ಧರಿಸಿದೆ.
ಸೂಕ್ತ ದಾಖಲೆಗಳನ್ನು ಪಡೆದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈಗ ಒಟ್ಟು 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಲಿದೆ. ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4.36 ಕೋಟಿ ಜನರಿಗೆ ಅನುಕೂಲವಾಗಿದೆ. ಆದರೆ, ಬಿಪಿಎಲ್ ಗೆ ಅರ್ಹರಲ್ಲದ ಫಲಾನುಭವಿಗಳು ಉಚಿತ ಆಹಾರ ಧಾನ್ಯ ಪಡೆಯುತ್ತಿದ್ದಾರೆ ಎಂಬ ದೂರುಗಳಿವೆ. ಈ ನಿಟ್ಟಿನಲ್ಲಿ ಸೂಕ್ತ ಕಾರ್ಯಾಚರಣೆ ಮೂಲಕ ಮೃತರ ಹೆಸರಿನಲ್ಲಿರುವ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.