
ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಜನಪರ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಯಾರೂ ಆತಂಕ ಪಡುವ ಅಗತ್ಯವಿಲ್ಲ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಬಲ ತುಂಬುವ ಕಾರ್ಯಕ್ರಮಗಳಾಗಿವೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.