ಬೆಂಗಳೂರು: ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು ಸೇವೆ ಕಾಯಂಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ಇಂದು ತುಮಕೂರಿನಿಂದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಆರಂಭವಾಗಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸೇವೆ ಕಾಯಂಗಾಗಿ ಸೂಕ್ತ ಯೋಜನೆ ರೂಪಿಸುವುದಾಗಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. 10 -15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದ್ದಾರೆ.
ಸರ್ಕಾರದ ಪರ್ಯಾಯ ವ್ಯವಸ್ಥೆ ಬೆದರಿಕೆ ಅಸ್ತ್ರಕ್ಕೆ ಜಗ್ಗದೇ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳಿಂದ ಸೇವೆ ಕಾಯಂಗೆ ಆಗ್ರಹಿಸಿ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.