ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶಿಸಿದೆ.
ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಾಗ ಸೆಮಿಸ್ಟರ್ ಅವಧಿಗೆ ಬದಲಾಗಿ ಆಯಾ ಶೈಕ್ಷಣಿಕ ವರ್ಷಕ್ಕೆ ಅನ್ವಯಿಸುವಂತೆ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ.
ಈಗಾಗಲೇ ಪ್ರತಿ ವರ್ಷ ಶೈಕ್ಷಣಿಕ ವರ್ಷಕ್ಕೆ ಅನ್ವಯಿಸಿ ನೇಮಕ ಮಾಡಲಾಗುತ್ತಿದೆ. ಆದರೆ, ಅಧಿಕೃತ ಆದೇಶ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ ಅವರು ಅಧಿಕೃತ ಆದೇಶ ನೀಡಿದ್ದಾರೆ. 2023-24ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.