ಬೆಂಗಳೂರು: ಕಾಯಂಗೊಳಿಸುವಂತೆ ಒತ್ತಾಯಿಸಿ ಮತ್ತೊಂದು ಸುತ್ತಿನ ಹೋರಾಟಕ್ಕೆ ರಾಜ್ಯದ ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆ.
11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ನವೆಂಬರ್ 23ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಗೌರವ ಧನದ ಆಧಾರದ ಮೇಲೆ 11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, ಸೇವೆ ಕಾಯಂ ಗೊಳಿಸುವಂತೆ ಒತ್ತಾಯಿಸಿ ಇಂದಿನಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಸರ್ಕಾರ ಕೂಡಲೇ ಸ್ಪಂದಿಸಿ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದಲ್ಲಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ವೇಳೆ ವಿದ್ಯಾರ್ಥಿಗಳೊಂದಿಗೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅತಿಥಿ ಉಪನ್ಯಾಸಕರ ಸಂಘದ ಪ್ರಮುಖರು ಹೇಳಿದ್ದಾರೆ.