ಬೆಳಗಾವಿಯ ಸುವರ್ಣ ಗಾರ್ಡನ್ ನಲ್ಲಿ ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ್ದಾರೆ.
ಆದರ್ಎ, ಸಚಿವರು, ಸೇವಾ ಭದ್ರತೆ ಬಗ್ಗೆ ಭರವಸೆ ನೀಡಲಿಲ್ಲ. ಸಚಿವರ ವರ್ತನೆಯಿಂದ ಅತಿಥಿ ಉಪನ್ಯಾಸಕರು ಆಕ್ರೋಶಗೊಂಡಿದ್ದಾರೆ. ಈ ವೇಳೆ ಮಹಿಳಾ ಅತಿಥಿ ಉಪನ್ಯಾಸಕರು ಕಣ್ಣೀರಿಟ್ಟಿದ್ದಾರೆ. ಬಾಯಿ ಬಡಿದುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.