ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ. 2021 -22 ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ.
ಜನವರಿ 21 ರ ಮಧ್ಯರಾತ್ರಿ 12 ಗಂಟೆಗೆ ವರೆಗೂ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಗುರುವಾರದವರೆಗೆ 30 ಸಾವಿರಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
https://Dec.karnataka/gov.in ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ಮಣಿದ ಸರ್ಕಾರ ಗೌರವಧನ ಹೆಚ್ಚಳ ಮಾಡಿದೆ. ಆದರೆ, ಸರ್ಕಾರ ಹೊಸದಾಗಿ ತಂದ ನಿಯಮಾವಳಿಗಳಿಂದ ಅರ್ಧದಷ್ಟು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ ಎನ್ನಲಾಗಿದೆ.