ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠಮಾಡಲು ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಪ್ರಾಂಶುಪಾಲರಿಗೆ ಅನುಮತಿ ನೀಡಲಾಗಿದೆ.
ಕಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವ ಕಾರ್ಯಭಾರವನ್ನು ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರಲ್ಲಿ ಶೇಕಡ 50 ರಷ್ಟು ಉಪನ್ಯಾಸಕರನ್ನು ಷರತ್ತುಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.