alex Certify ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ನೇಮಕಾತಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ನೇಮಕಾತಿಗೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020 -21 ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವಕಾಶ ನೀಡಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯಿಂದ ಹೆಚ್ಚುವರಿ ಬೋಧನಾ ಕಾರ್ಯಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು, ಇದಕ್ಕಾಗಿ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಸರಿಸಬೇಕಾದ ಮಾನದಂಡ, ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಸದ್ಯ ಹಾಲಿ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸಲಿದ್ದು, ಅವಶ್ಯಕತೆ ಇರುವ ಕಡೆ ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಶೈಕ್ಷಣಿಕ ಸಾಲಿನ 2, 4 ಮತ್ತು 6 ನೇ ಸೆಮಿಸ್ಟರ್ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ https://dce.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...