alex Certify BREAKING: 10,636 ಅತಿಥಿ ಉಪನ್ಯಾಸಕರ ನೇಮಕಾತಿಗೆ ಜ. 27 ರಿಂದ ಕೌನ್ಸೆಲಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 10,636 ಅತಿಥಿ ಉಪನ್ಯಾಸಕರ ನೇಮಕಾತಿಗೆ ಜ. 27 ರಿಂದ ಕೌನ್ಸೆಲಿಂಗ್

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಜನವರಿ 27 ರಿಂದ ಕೌನ್ಸೆಲಿಂಗ್ ನಡೆಯಲಿದೆ. ಜನವರಿ 27 ರಿಂದ 30 ರವರೆಗೆ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. 10,636 ಅತಿಥಿ ಉಪನ್ಯಾಸಕರ ನೇಮಕಾತಿ ನಡೆಯಲಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೇಮಕಾತಿ ನಡೆಯಲಿದ್ದು, ಜೇಷ್ಠತೆ ಆಧಾರದಲ್ಲಿ ತಮಗೆ ಬೇಕಾದ ಕಾಲೇಜು ಆಯ್ಕೆ ಮಾಡಿಕೊಳ್ಳಬಹುದು. ನೇಮಕವಾದ ಬಳಿಕ ಎರಡು ದಿನಗಳಲ್ಲಿ ವರದಿ ಮಾಡಿಕೊಳ್ಳಬೇಕಿದೆ.

ಮೂಲ ದಾಖಲೆ ಪರಿಶೀಲನೆಗೆ ಒಪ್ಪಿಸಿ ಕೆಲಸಕ್ಕೆ ಹಾಜರಾಗಬೇಕು. ದಾಖಲೆ ಸರಿಯಿಲ್ಲದಿದ್ದರೆ ಅಂತವರನ್ನು ಕೈ ಬಿಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...