ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
2022 -23 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಮಾರ್ಗಸೂಚಿ ಮತ್ತು ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಬುಧವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 16 ರಿಂದ 25ರ ಒಳಗೆ ಮೆರಿಟ್ ಪಟ್ಟಿ, ಸ್ಥಳ, ಆಯ್ಕೆ ಕೌನ್ಸಿಲಿಂಗ್ ನಡೆಸಬೇಕು. ಫೆಬ್ರವರಿ 1 ರೊಳಗೆ ಆಯ್ಕೆಯಾದ ಅತಿಥಿ ಉಪನ್ಯಾಸಕರು ಕಾಲೇಜುಗಳಿಗೆ ಪ್ರವೇಶ ಪಡೆಯಬೇಕೆಂದು ಹೇಳಲಾಗಿದೆ. ಮಾಹಿತಿಗಾಗಿ ಕಾಲೇಜು ಶಿಕ್ಷಣ ಇಲಾಖೆಯ https://dce.karnataka.gov.in ವೆಬ್ ಸೈಟ್ ಗಮನಿಸಬಹುದಾಗಿದೆ.