ಮೈಸೂರು: ಕೆಆರ್ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠ ಮಾಡುತ್ತಿದ್ದ ಉಪನ್ಯಾಸಕರೊಬ್ಬರು ಸಿಲೆಬಸ್ ಜೊತೆಗೆ ಅಶ್ಲೀಲ ಫೋಟೋವನ್ನು ಕಳುಹಿಸಿದ್ದಾರೆ. ಇದರಿಂದಾಗಿ ಗ್ರೂಪ್ ನಲ್ಲಿದ್ದ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಮುಜುಗರಕ್ಕೆ ಒಳಗಾಗಿದ್ದಾರೆ.
ಅತಿಥಿ ಉಪನ್ಯಾಸಕರೊಬ್ಬರು ಇಂತಹ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಕೆಆರ್ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅನೇಕ ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಅವರು ಕೆಲಸ ಮಾಡುತ್ತಿದ್ದು ಆನ್ಲೈನ್ ಪಾಠ ಮಾಡುವ ವೇಳೆ ವಾಟ್ಸಾಪ್ ಗ್ರೂಪ್ ಗೆ ಸಿಲಬಸ್ ಜೊತೆಗೆ ಅಶ್ಲೀಲ ಫೋಟೋವನ್ನು ಕೂಡ ಸೆಂಡ್ ಮಾಡಿದ್ದಾರೆ.
ಇದೇ ವಾಟ್ಸಾಪ್ ಗ್ರೂಪ್ ನಲ್ಲಿದ್ದ ಬೇರೆ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಮುಜುಗರಕ್ಕೆ ಒಳಗಾಗಿ ಈ ವಿಷಯವನ್ನು ಪ್ರಾಂಶುಪಾಲರಿಗೆ ತಿಳಿಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಜೊತೆಗೆ ಈ ಕುರಿತು ಚರ್ಚೆ ನಡೆಸಿದ ಪ್ರಾಂಶುಪಾಲರು ಅತಿಥಿ ಉಪನ್ಯಾಸಕನನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದಾರೆ ಎಂದು ಹೇಳಲಾಗಿದೆ.