alex Certify BIG NEWS : ರಾಜ್ಯ ಸರ್ಕಾರದಿಂದ `ಸರ್ಕಾರಿ ನೌಕರರ ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ `ಸರ್ಕಾರಿ ನೌಕರರ ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ ಸರ್ಕಾರದ ಆದೇಶದಲ್ಲಿ ಹೊರಡಿಸಲಾದ ವರ್ಗಾವಣಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಗಳನ್ನು ಹೊರಡಿಸುವುದು ಅವಶ್ಯವೆಂದು ಮನಗಾಣಲಾಗಿರುವುದರಿಂದ ಈ ಕೆಳಕಂಡಂತೆ ಆದೇಶಿಸಿದೆ.

ದಿನಾಂಕ: 07.06.2013ರ ಆದೇಶವನ್ನು ರದ್ದುಪಡಿಸಿ, ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವ ಬಗ್ಗೆ ಈ ಆದೇಶದಲ್ಲಿ ಸೂಚಿಸಿರುವಂತೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರವು ಇಚ್ಛಿಸುತ್ತದೆ. ಈ ಮಾರ್ಗಸೂಚಿಗಳು 2024-25 ನೇ ಸಾಲಿನಿಂದ ಜಾರಿಗೆ ಬರುತ್ತವೆ. ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.

(1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ

(2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ನಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.

(3) “ಚಲನವಲನ” ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.

ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.

4) ಗುಂಪು-‘ಎ’, ‘ಬಿ’, ‘ಸಿ’, ಮತ್ತು ‘ಡಿ’ ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು.

(5) ‘ಜೇಷ್ಠತಾ ಘಟಕ’ ಎಂದರೆ ಒಂದು ಹುದ್ದೆಗೆ ಸಂಬಂಧಿಸಿದಂತೆ ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ;

3. ವರ್ಗಾವಣಾ ಪ್ರಕ್ರಿಯೆ:

ವರ್ಗಾವಣೆ/ಚಲನವಲನಗಳನ್ನು ಸಕ್ಷಮ ಪ್ರಾಧಿಕಾರವು ಈ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು.

4. ವರ್ಗಾವಣೆಯ ಬಗ್ಗೆ ನಿರ್ಬಂಧಗಳು/ ಸಕ್ಷಮ ಪ್ರಾಧಿಕಾರ ಹಾಗೂ ನೌಕರನ ಜವಾಬ್ದಾರಿಗಳು:-
(1) ಪ್ರಸಕ್ತ 2024-25ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆ/ ಚಲನವಲನಗಳ ಸಂಖ್ಯೆಯು ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ០៥: 25.06.2024 ໐໐໖ ០៥: 09.07.2024 ವರ್ಗಾವಣೆ ಕೈಗೊಳ್ಳಲು ಪ್ರತ್ಯಾಯೋಜಿಸಲಾಗಿದೆ.

(2) ಆದರೆ ವರ್ಗಾವಣೆ/ ಚಲನವಲನಗಳನ್ನು ಮಾಡುವಾಗ ಯಾವುದೇ ಸರ್ಕಾರಿ ನೌಕರನು ಕಡ್ಡಾಯ ನಿರೀಕ್ಷಣೆಯಲ್ಲಿ ಉಳಿಯುವಂತಹ ಸಂದರ್ಭಗಳು ಉಂಟಾಗದಂತೆ ನೋಡಿಕೊಳ್ಳತಕ್ಕದ್ದು.

(3) ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಆರೋಪಗಳಿದ್ದಲ್ಲಿ ಹಾಗೂ ಆತನ ವಿರುದ್ಧ ಇಲಾಖಾ ವಿಚಾರಣೆ / ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಸೂಕ್ಷ್ಮ ಹುದ್ದೆಗಳಿಗೆ / ಕಾರ್ಯಕಾರಿ ಹುದ್ದೆಗಳಿಗೆ ನೇಮಿಸದೇ ಅವರು ತಮ್ಮ ವಿರುದ್ಧ ಬಾಕಿಯಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲದಿರುವಂತಹ ಕಾರ್ಯಕಾರಿಯೇತರ (non-executive) ಹುದ್ದೆಗಳಿಗೆ ನೇಮಿಸತಕ್ಕದ್ದು. ಮುಂದುವರೆದು, ಇಲಾಖಾ ವಿಚಾರಣೆ/ ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ನೌಕರನನ್ನು ಸರ್ಕಾರಿ ಸ್ಥಳನಿಯುಕ್ತಿಗೊಳಿಸಬಾರದು.

(4) ವರ್ಗಾವಣೆಗೊಂಡ ಸರ್ಕಾರಿ ನೌಕರರು ವರ್ಗಾವಣೆ ಆದೇಶದ ಪ್ರಕಾರ ಅವರಿಗೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗದೆ, ವೈದ್ಯಕೀಯ ಕಾರಣಗಳನ್ನು ನೀಡಿ ರಜೆ ಅರ್ಜಿಗಳನ್ನು ಸಲ್ಲಿಸುವ ಪ್ರಕರಣಗಳಲ್ಲಿ, ವರ್ಗಾವಣೆಗೊಂಡ ಅಂತಹ ಸರ್ಕಾರಿ ನೌಕರ, ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ(as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ದೃಢೀಕರಣ ಪತ್ರದೊಂದಿಗೆ ರಜೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...