ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತು ಒಮಿಕ್ರಾನ್ ಸೋಂಕು ತಡೆಯಲು ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ.
ರಾತ್ರಿಪಾಳಿ ಸಿಬ್ಬಂದಿಗೆ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ. ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯಾಗಿ ನಿರ್ಬಂಧ ಇರುವುದಿಲ್ಲ. ಹೋಂ ಡೆಲಿವರಿ ಮತ್ತು ಆನ್ ಲೈನ್ ಡೆಲಿವರಿಗೆ ನಿರ್ಬಂಧ ಇರುವುದಿಲ್ಲ. ರೈಲು, ಬಸ್, ವಿಮಾನ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ. ಪ್ರಯಾಣಿಕರು ಟಿಕೆಟ್ ತೋರಿಸಿ ಓಡಾಡಲು ಅನುಮತಿ ನೀಡಲಾಗಿದೆ.
ಸಭೆ, ಮದುವೆ ಸಮಾರಂಭಗಳಿಗೆ 300 ಜನರಿಗೆ ಅವಕಾಶ ನೀಡಲಾಗಿದೆ. ಸಮಾರಂಭಗಳಲ್ಲಿ 300 ಜನರು ಸೇರಲು ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ.
ಹೀಗೆ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಡಿಸೆಂಬರ್ 28 ರಿಂದ ಜನವರಿ 7 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಹಾರಾಷ್ಟ್ರ, ಕೇರಳ ಗಡಿಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು.
ನೈಟ್ ಕರ್ಫ್ಯೂ ಸಂದರ್ಭದಲ್ಲಿ ತುರ್ತು ಸೇವೆಗಳಿಗೆ ಅಡ್ಡಿ ಇರುವುದಿಲ್ಲ. ರಾತ್ರಿಪಾಳಿ ಸಿಬ್ಬಂದಿಗೆ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಪ್ರಯಾಣಿಕರು ಟಿಕೆಟ್ ತೋರಿಸಿ ಓಡಾಡುವುದಕ್ಕೆ ಅನುಮತಿ ನೀಡಲಾಗಿದೆ. ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಹೊಸ ವರ್ಷಾಚರಣೆ ನಿಷೇಧಿಸಲಾಗಿದೆ.
ಡಿಸೆಂಬರ್ 30ರಿಂದ ಜನವರಿ 2 ರವರೆಗೆ ಹೋಟೆಲ್, ಪಬ್, ಕ್ಲಬ್, ರೆಸ್ಟೋರೆಂಟ್ ಗಳಿಗೆ 50: 50 ನಿಯಮ ಅನ್ವಯವಾಗಲಿದೆ ಎನ್ನಲಾಗಿದೆ.