ಬೆಂಗಳೂರು: ನೈಟ್ ಕರ್ಫ್ಯೂ ಜಾರಿಗೆ ಸಂಬಂಧಿಸಿದಂತೆ ಗೈಡ್ಲೈನ್ಸ್ ಬಿಡುಗಡೆ ಮಾಡಲಾಗಿದ್ದು, ರಾತ್ರಿ ವೇಳೆ ಬಸ್, ರೈಲು, ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಅದೇ ರೀತಿ ಪಿಕಪ್, ಡ್ರಾಪ್ ಮಾಡಲು ಆಟೋ, ಟ್ಯಾಕ್ಸಿಗಳಿಗೆ ಅವಕಾಶ ನೀಡಲಾಗಿದೆ. ಆಟೋ, ಟ್ಯಾಕ್ಸಿಗಳು ಬಸ್ ನಿಲ್ದಾಣ, ರೈಲು, ವಿಮಾನ ನಿಲ್ದಾಣಗಳಿಗೆ ಪ್ರಯಾಣಿಕರನ್ನು ಪಿಕಪ್ ಡ್ರಾಪ್ ಮಾಡಬಹುದಾಗಿದೆ. ದೂರದ ಊರುಗಳಿಗೆ ತೆರಳುವ ಬಸ್ ಗಳ ಸಂಚಾರಕ್ಕೆ ಯಾವುದೇ ಸಮಸ್ಯೆಯಿರುವುದಿಲ್ಲ.
ರಾತ್ರಿ ವೇಳೆ ಬಸ್, ರೈಲು, ವಿಮಾನ ಸಂಚಾರಕ್ಕೆ ಅವಕಾಶ ಇರುತ್ತದೆ. ಸರಕುಸಾಗಣೆ ವಾಹನಗಳಿಗೆ ಯಾವುದೇ ನಿರ್ಬಂಧವಿಲ್ಲ. 24X7 ಕಾರ್ಯನಿರ್ವಹಿಸುವ ಕೈಗಾರಿಕೆಗಳಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ನಾಳೆಯಿಂದ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ಹೇಳಲಾಗಿದೆ.