ಬೆಂಗಳೂರು : ಘನತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದ್ದು, ಈ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ.
ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಹೆಚ್ಚುವರಿ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಮಾರ್ಗಸೂಚಿಗಳು
• ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯವನ್ನು ಅಂದಾಜಿಸಿ, ತ್ಯಾಜ್ಯವನ್ನು ಸಂಪೂರ್ಣವಾಗಿ ಸಂಗ್ರಹಿಸಿ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸುವುದು.
• ಮಾರುಕಟ್ಟೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣವಾಗುವ ಬ್ಲ್ಯಾಕ್ಸ್ಪಾಟ್ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಕ್ರಮವಹಿಸಬೇಕು.
• ಹಸಿ ತ್ಯಾಜ್ಯವನ್ನು ಆದ್ಯತೆ ಮೇರೆಗೆ ವಾರ್ಡ್ಗಳಲ್ಲಿಯೇ ತೋಟಗಾರಿಕೆ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಲ್ಪಿಸಿಕೊಂಡು ವಿಲೇವಾರಿ ಮಾಡುವುದು.
• ವಾರ್ಡ್ಗಳಲ್ಲಿ ವಿಕೇಂದ್ರೀಕೃತ ಹಸಿ ತ್ಯಾಜ್ಯ ಸಂಸ್ಕರಣಾ ಘಟಕಗಳಿದ್ದಲ್ಲಿ ಅಲ್ಲಿಗೆ ವಿಲೇವಾರಿ ಮಾಡುವುದು.
ಬಾಳೆ, ಮಾವಿನ ಎಲೆ, ಹೂವು ಹಾಗೂ ಇತರೆ ಹಬ್ಬದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನ ವಿಂಗಡಿಸಿ ನೀಡಲು ಅರಿವು ಮೂಡಿಸುವುದು
ಹಬ್ಬದ ಸಾಮಾಗ್ರಿಗಳ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್ಗಳನ್ನು ಬಳಸದಂತೆ ವಾರ್ಡ್ಗಳಲ್ಲಿ ಘನತ್ಯಾಜ್ಯ ಆರೋಗ್ಯ ಅಧಿಕಾರಿಗಳು ಮತ್ತು ಮಾರ್ಷಲ್ಗಳ ತಂಡ ನಿಗಾವಹಿಸಬೇಕು.
ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಹೆಚ್ಚುವರಿ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಮಾರ್ಗಸೂಚಿಗಳು
ಪ್ರತಿದಿನ ಪರಿವೀಕ್ಷಣೆ ಕೈಗೊಂಡು ಪ್ಲಾಸ್ಟಿಕ್ ಮಾರಾಟ / ಬಳಕೆದಾರರಿಗೆ ನಿಯಮಾನುಸಾರ ದಂಡ ವಿಧಿಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಮರುಬಳಕೆಯಾಗದಂತೆ ಅಗತ್ಯ ಕ್ರಮ ವಹಿಸುವುದು
ಕಸ ಸುರಿಯುವ ಸ್ಥಳಗಳಲ್ಲಿ ತ್ಯಾಜ್ಯ ಶೇಖರಣೆಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಶೇಷ ಗಮನ ಹರಿಸುವುದು.