![](https://kannadadunia.com/wp-content/uploads/2021/12/night-curfew-new.jpg)
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರ ಟಫ್ ರೂಲ್ಸ್ ಜಾರಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ತಜ್ಞರು, ಹಿರಿಯ ಅಧಿಕಾರಿಗಳ ಸಭೆಯಲ್ಲಿ ಹಲವು ತೀರ್ಮಾನ ಕೈಗೊಳ್ಳಲಾಗಿದೆ.
ಎರಡು ವಾರಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಈ ಅವಧಿಯಲ್ಲಿ ಯಾವುದೇ ಪ್ರತಿಭಟನೆ, ಜಾತ್ರೆ, ರ್ಯಾಲಿ, ಪ್ರಚಾರ ಸಭೆಗಳಿಗೆ ಅವಕಾಶ ಇರುವುದಿಲ್ಲ.
ಬೆಂಗಳೂರಿನಲ್ಲಿ 10, 11, 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಶಾಲೆ-ಕಾಲೇಜುಗಳ ಬಂದ್ ಮಾಡಲು ಸೂಚನೆ ನೀಡಲಾಗಿದೆ.
ಬಾರ್, ಮಾಲ್, ಥಿಯೇಟರ್ ಹೋಟೆಲ್ ಗಳಲ್ಲಿ ಶೇಕಡ 50ರ ಮಿತಿ ಹೇರಲಾಗಿದೆ.
ಹೊರಾಂಗಣ ಮದುವೆಗೆ 200 ಮತ್ತು ಒಳಾಂಗಣ ಸಮಾರಂಭಗಳಿಗೆ 100 ಜನರಿಗೆ ಮಿತಿ ಹೇರಲಾಗಿದೆ.
ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ದೇವಸ್ಥಾನ, ಪ್ರಾರ್ಥನಾ ಮಂದಿರಗಳಲ್ಲಿ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಎರಡು ಡೋಸ್ ಪಡೆದವರಿಗೆ ಮಾತ್ರ ಪ್ರವೇಶ ನೀಡಬೇಕಿದೆ.
ಈಜುಕೊಳ, ಜಿಮ್, ಕ್ರೀಡಾಂಗಣಗಳಲ್ಲಿ ಶೇಕಡ 50 ರ ಮಿತಿ ಇದ್ದು, ಪ್ರವೇಶಕ್ಕೆ 2 ಡೋಸ್ ಲಸಿಕೆ ಕಡ್ಡಾಯವಾಗಿರುತ್ತದೆ.
ವಾರದಲ್ಲಿ 5 ದಿನ ಕಚೇರಿ ತೆರೆಯಲು ಅವಕಾಶ ನೀಡಲಾಗಿದ್ದು, ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಶೇಕಡ 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ತಿಳಿಸಲಾಗಿದೆ.
ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಅಗತ್ಯ ವಸ್ತು ಸೇವೆ ಹೊರತಾಗಿ ಉಳಿದೆಲ್ಲ ಚಟುವಟಿಕೆಗಳು ಬಂದ್ ಆಗಿರುತ್ತದೆ.
ಅನಗತ್ಯವಾಗಿ ತಿರುಗಾಡುವಂತಿಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು, ಪಾಸಿಟಿವಿಟಿ ದರ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ.
ಹೊರರಾಜ್ಯದಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ಕಡ್ಡಾಯವಾಗಿರುತ್ತದೆ. ಇಂದು ರಾತ್ರಿಯಿಂದಲೇ ನಿಯಮಗಳು ಜಾರಿಗೆ ಬರಲಿವೆ.