alex Certify BREAKING NEWS: ಜವರಾಯನ ಗೆದ್ದು ಬಂದ ಮಗು: ಬೋರ್ ವೆಲ್ ಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜವರಾಯನ ಗೆದ್ದು ಬಂದ ಮಗು: ಬೋರ್ ವೆಲ್ ಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆ

ಗುಜರಾತ್‌ ನ ಜಾಮ್‌ ನಗರದ ಗೋವಾನಾ ಗ್ರಾಮದಲ್ಲಿ ಮಂಗಳವಾರ ಸಂಜೆ ಬೋರ್‌ ವೆಲ್‌ ಗೆ ಬಿದ್ದ ಎರಡು ವರ್ಷದ ಬಾಲಕನನ್ನು ಬುಧವಾರ ಮುಂಜಾನೆ ರಕ್ಷಿಸಲಾಗಿದೆ.

ಮಂಗಳವಾರ ಸಂಜೆ 6.30ರ ಸುಮಾರಿಗೆ ಮಗು ಬೋರ್‌ವೆಲ್‌ಗೆ ಬಿದ್ದಿತ್ತು. 9 ಗಂಟೆಗಳ ಕಾರ್ಯಾಚರಣೆಯ ನಂತರ ಬೆಳಗಿನಜಾವ 4 ಗಂಟೆಗೆ ರಕ್ಷಿಸಲಾಯಿತು. ಮಗುವನ್ನು ತಕ್ಷಣವೇ ಚಿಕಿತ್ಸೆಗಾಗಿ ಜಾಮ್‌ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ಸೇವಾ ಇಲಾಖೆಯ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.

ಜನವರಿಯಲ್ಲಿ, ಗುಜರಾತ್‌ನ ದ್ವಾರಕಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಿದ ಒಂದು ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಳು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...