ಗುಜರಾತ್ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳೂ ಇದರಲ್ಲಿ ಹಿಂದೆ ಬಿದ್ದಿಲ್ಲ.
ಇದರ ಮಧ್ಯೆ ಚುನಾವಣಾ ಅಭ್ಯರ್ಥಿಗಳ ಕುರಿತಂತೆ ಅಸೋಸಿಯೇಷನ್ ಫಾರ್ ಡೊಮೆಸ್ಟಿಕ್ ರಿಫಾರ್ಮ್ಸ್ ಕುತೂಹಲಕರ ಸಂಗತಿ ಒಂದನ್ನು ಬಹಿರಂಗಪಡಿಸಿದೆ. ಗುಜರಾತ್ ವಿಧಾನಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಶೇಕಡ 21ರಷ್ಟು ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದನ್ನು ತಿಳಿಸಿದೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಒಟ್ಟು 788 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈ ಪೈಕಿ 167 ಮಂದಿ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷದ ಶೇಕಡ 36 ಮಂದಿ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದರೆ, ಕಾಂಗ್ರೆಸ್ ನ ಶೇಕಡ 35 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಇನ್ನು ಬಿಜೆಪಿಯ ಶೇಕಡ 16 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ.