ನವದೆಹಲಿ : ಕಳೆದ 24 ಗಂಟೆಗಳಲ್ಲಿ ಗುಜರಾತ್ ನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸುರಿದ ಧಾರಾಕಾರ ಮಳೆಗೆ ಕಳೆದ ಎರಡು ದಿನಗಳಲ್ಲಿ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೊನೆಗೊಂಡ 30 ಗಂಟೆಗಳಲ್ಲಿ ರಾಜ್ಯದ 37 ತಾಲ್ಲೂಕುಗಳಲ್ಲಿ 100 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ.
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳನ್ನು ಕಚ್, ಜಾಮ್ನಗರ್, ಜುನಾಗಢ್ ಮತ್ತು ನವಸಾರಿಯಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್ಇಒಸಿ) ಪ್ರಕಾರ, ಎಸ್ಇಒಸಿ ಪ್ರಕಾರ, ಶನಿವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಜುನಾsಗಢ ಜಿಲ್ಲೆಯ ವಿಸಾವದರ್ ತಾಲ್ಲೂಕಿನಲ್ಲಿ 398 ಮಿ.ಮೀ. ಮಳೆಯಾಗಿದೆ.