alex Certify BREAKING: ಗುಜರಾತ್​ ಸಿಎಂ ಸ್ಥಾನಕ್ಕೆ ವಿಜಯ್​ ರೂಪಾನಿ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗುಜರಾತ್​ ಸಿಎಂ ಸ್ಥಾನಕ್ಕೆ ವಿಜಯ್​ ರೂಪಾನಿ ರಾಜೀನಾಮೆ

ಗುಜರಾತ್​ ಸಿಎಂ ವಿಜಯ್​ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರೂಪಾನಿ ರಾಜ್ಯಪಾಲರಿಗೆ ಹಸ್ತಾಂತರಿಸಿದ್ದಾರೆ. ಪ್ರಧಾನಿ ಮೋದಿ ತವರು ರಾಜ್ಯದಲ್ಲಿ ಈ ದಿಢೀರ್​ ಬೆಳವಣಿಗೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಗುಜರಾತ್​ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಮುಂಚಿತವಾಗಿ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಜಯ್​ ರೂಪಾನಿ ಈ ನಡೆ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಶೀಘ್ರದಲ್ಲೇ ರೂಪಾನಿ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.

ಬಿಜೆಪಿಯ ಹಿರಿಯ ನಾಯಕ ಬಿ.ಎಲ್. ಸಂತೋಷ್​ ಅಹಮದಾಬಾದ್​ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲೇ ಗುಜರಾತ್​ ಹೊಸ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಉನ್ನತ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...