alex Certify ಗೋಧ್ರೋತ್ತರ ಹಿಂಸಾಚಾರದಲ್ಲಿ 17 ಮಂದಿ ಸಾವಿಗೆ ಕಾರಣವಾಗಿದ್ದ ಆರೋಪ ಹೊತ್ತವರ ಖುಲಾಸೆ; ಗುಜರಾತಿನ ಹಲೋಲ್ ನ್ಯಾಯಾಲಯದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋಧ್ರೋತ್ತರ ಹಿಂಸಾಚಾರದಲ್ಲಿ 17 ಮಂದಿ ಸಾವಿಗೆ ಕಾರಣವಾಗಿದ್ದ ಆರೋಪ ಹೊತ್ತವರ ಖುಲಾಸೆ; ಗುಜರಾತಿನ ಹಲೋಲ್ ನ್ಯಾಯಾಲಯದ ತೀರ್ಪು

2002ರ ಗೋಧ್ರೋತ್ತರ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರ ಸಾವಿಗೆ ಕಾರಣರಾಗಿದ್ದ ಆರೋಪ ಹೊತ್ತ 22 ಮಂದಿಯನ್ನು ಗುಜರಾತಿನ ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದ ನ್ಯಾಯಾಲಯ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.

ಫೆಬ್ರವರಿ 28, 2002 ರಂದು ಈ ಘಟನೆ ನಡೆದಿದ್ದು, ಆರೋಪಿಗಳು, ಇಬ್ಬರು ಮಕ್ಕಳು ಸೇರಿದಂತೆ 17 ಮಂದಿಯನ್ನು ಕೊಲೆ ಮಾಡಿ ನಂತರ ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಸುಟ್ಟು ಹಾಕಿದ್ದರು ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹರ್ಷ್ ತ್ರಿವೇದಿ ಮಂಗಳವಾರದಂದು ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಈ ಪೈಕಿ ಎಂಟು ಮಂದಿ ವಿಚಾರಣೆ ಸಮಯದಲ್ಲಿಯೇ ಮೃತಪಟ್ಟಿದ್ದರು.

ಫೆಬ್ರವರಿ 27, 2002 ರಂದು ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರ ಸೇವಕರಿದ್ದ ರೈಲಿಗೆ ಬೆಂಕಿ ಹಚ್ಚಿದ ಪರಿಣಾಮ 59 ಮಂದಿ ಮೃತಪಟ್ಟಿದ್ದರು. ಇದಾದ ಮರುದಿನವೇ ಸಮೀಪದ ದೆಲೋಲ್ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ವಿಚಾರಣೆ ನಡೆಸಿದ್ದ ಪೊಲೀಸರು 22 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ ಈಗ ಎಲ್ಲರೂ ಖುಲಾಸೆಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...