alex Certify ಗುಜರಾತ್ 2ನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ಡಿ. 5 ರಂದು ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ 2ನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ಡಿ. 5 ರಂದು ಮತದಾನ

ಗುಜರಾತ್ ವಿಧಾನಸಭೆ ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ.

ಅಭ್ಯರ್ಥಿಗಳಿಗೆ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ 89 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. 19 ಜಿಲ್ಲೆಗಳಲ್ಲಿ ಮೊದಲ ಹಂತದ ಚುನಾವಣೆಗೆ ಮತದಾನ ನಡೆದಿತ್ತು.

ಡಿಸೆಂಬರ್ 5 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...