ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕ್ರಿಕೆಟಿಗ ರವೀಂದ್ರ ಜಡೇಜಾ ಮತ್ತು ಅವರ ಪತ್ನಿ- ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜಾ ಅವರನ್ನು ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ಭೇಟಿಯಾದರು. ರಿವಾಬಾ ಜಡೇಜಾ ಗುಜರಾತ್ ಚುನಾವಣೆಯಲ್ಲಿ ಜಾಮ್‌ನಗರ ಉತ್ತರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ವಿದ್ಯಾಭ್ಯಾಸದಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ ರಿವಾಬಾ ಜಡೇಜಾ ಜಾಮ್‌ನಗರ ಉತ್ತರ ಕ್ಷೇತ್ರದಿಂದ ರಾಜಕೀಯ ಕಣದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಎರಡು ಹಂತದ ಚುನಾವಣೆಗೆ ಬಿಜೆಪಿ ತನ್ನ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.