
ಅಹಮದಾಬಾದ್: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಬನಸ್ಕಾಂತ ಜಿಲ್ಲೆಯ ದೀಸಾದಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕರ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಾರ್ಖಾನೆಯಲ್ಲಿ ಸಿಲುಕಿದ್ದ ಐವರು ಕಾರ್ಮಿಕರನ್ನು ರಕ್ಷಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.