alex Certify ಕುಡಿದು ಗಲಾಟೆ ಮಾಡುತ್ತಿದ್ದ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದು ಗಲಾಟೆ ಮಾಡುತ್ತಿದ್ದ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ…!

ಕುಡುಕ ಗಂಡನ ಕಾಟದಿಂದ ರೋಸಿ ಹೋಗಿರುವ ಮಡದಿಯೊಬ್ಬರು ತಮ್ಮ ಪತಿಯನ್ನು ಕುತ್ತಿಗೆ ಹಿಸುಕಿ ಕೊಂದ ಪ್ರಕರಣವೊಂದನ್ನು ಭೇದಿಸಲು ಗುಜರಾತ್‌ನ ಸೂರತ್‌ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೂರತ್ ಮುನ್ಸಿಪಲ್ ಕಾರ್ಪೊರೇಷನ್‌ನ ಕಾರ್ಮಿಕ ಭವೇಶ್ ಸೋಲಂಕಿ ಶವವಾಗಿ ಪತ್ತೆಯಾಗಿದ್ದು, ಆತನ ಪತ್ನಿ ಮೀನಾಕ್ಷಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇವಲ 17 ಕಿ.ಮೀ. ದೂರದ ಪ್ರಯಾಣಕ್ಕೆ ಬರೋಬ್ಬರಿ 10 ಸಾವಿರ ರೂಪಾಯಿ ಕ್ಯಾಬ್‌ ಬಿಲ್…!

ಪತಿಯ ಕುಡಿತದ ಚಟದಿಂದ ಮಹಿಳೆ ಬೇಸತ್ತಿದ್ದಳು ಎನ್ನಲಾಗಿದೆ. ಸೋಲಂಕಿ ಅವರು ಪೌರಕಾರ್ಮಿಕ ಸಂಸ್ಥೆಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಿಂದ ಸೋಲಂಕಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಸೋಲಂಕಿ ದೇಹದಲ್ಲಿ ಕತ್ತು ಹಿಸುಕಿದ ಗುರುತುಗಳು ಕಂಡುಬಂದಿವೆ. ನಗರದ ಲಾಲ್‌ಗೇಟ್‌ ಪೊಲೀಸರು ಈಗ ಮೀನಾಕ್ಷಿಯನ್ನು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಕೊಲೆ ಆರೋಪಪಟ್ಟಿ ಸಿದ್ಧಪಡಿಸಿದ್ದಾರೆ.

ಪೊಲೀಸರ ಪ್ರಕಾರ, ಮೀನಾಕ್ಷಿ ತನ್ನ ಪತಿಯನ್ನು ಕೊಂದು, ನಂತರ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಆತ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

ಸಂತ್ರಸ್ತೆಯು ತನ್ನ ಕುಟುಂಬದೊಂದಿಗೆ ಕಾಜಿಪುರ ಪ್ರದೇಶದ ಚುಮ್ಮಲಿಸ್ ನಿ ಚಾಲಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಭಾನುವಾರದಂದು ಈ ಮಹಿಳೆ ತನ್ನ ಪತಿ ಹಾಸಿಗೆಯಿಂದ ಬಿದ್ದು ಪ್ರಜ್ಞಾಹೀನನಾಗಿದ್ದಾನೆ ಎಂದು ತನ್ನ ನೆರೆಹೊರೆಯವರಿಗೆ ತಿಳಿಸಿದ್ದಾರೆ. ಆಗ ಸೋಲಂಕಿಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸೋಲಂಕಿ ಅವರ ಸಹೋದರ ಮಹೇಶ್ ಸೋಮವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಮೀನಾಕ್ಷಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿತದ ಚಟವಿದ್ದ ಸೋಲಂಕಿ ತನ್ನ ಕೆಲಸವನ್ನು ಸರಿಯಾಗಿ ಮಾಡುತ್ತಿರಲಿಲ್ಲ. ಇದರಿಂದ ದಂಪತಿ ನಡುವೆ ಜಗಳ ನಡೆದಿದೆ. ಸೋಲಂಕಿಯೊಂದಿಗೆ ಜಗಳವಾಡಿದ ನಂತರ ಮೀನಾಕ್ಷಿ ಆತ ಮಲಗಿದ್ದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...