
ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ಪಟ್ಟಣದ ಬಳಿ ಶನಿವಾರ ನಡೆದ ದುರಂತ ಘಟನೆಯಲ್ಲಿ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 37 ಕಿಮೀ ದೂರದಲ್ಲಿರುವ ಜಸಾಲ್‌ಪುರ ಗ್ರಾಮದಲ್ಲಿ ಕಾರ್ಮಿಕರು ಭೂಗತ ಟ್ಯಾಂಕ್‌ಗಾಗಿ ಹೊಂಡ ಅಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ
ಕಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಹ್ಲಾದಸಿಂಗ್ ವಘೇಲಾ ಅವರ ಪ್ರಕಾರ, ಮಣ್ಣು ಕುಸಿತದಲ್ಲಿ ಹಲವಾರು ಕಾರ್ಮಿಕರು ಸಮಾಧಿಯಾಗಿದ್ದಾರೆ. 5ದು ಶವಗಳನ್ನು ಹೊರತೆಗೆಯಲಾಗಿದೆ. ಮೂರರಿಂದ ನಾಲ್ಕು ಇತರ ಕಾರ್ಮಿಕರು ಸಿಕ್ಕಿಬಿದ್ದಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.