alex Certify SHOCKING: ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಸಾವು: ಕಳೆದ 45 ದಿನಗಳಲ್ಲಿ 8ನೇ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಸಾವು: ಕಳೆದ 45 ದಿನಗಳಲ್ಲಿ 8ನೇ ಘಟನೆ

ಗುಜರಾತ್‌ ನ ರಾಜ್‌ಕೋಟ್‌ ನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಗುಜರಾತ್‌ನಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದ ಎಂಟನೇ ಘಟನೆ ಇದಾಗಿದೆ. ಮೃತರನ್ನು ಮಯೂರ್ ಎಂದು ಗುರುತಿಸಲಾಗಿದೆ. ಶಾಸ್ತ್ರಿ ಮೈದಾನದಲ್ಲಿ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಮಯೂರ್ ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಭಾನುವಾರ ಆಟವಾಡುತ್ತಿದ್ದಾಗ ಬಳಲಿದ ಅವರು ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ಸ್ನೇಹಿತರು ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮಯೂರ್ ಅಕ್ಕಸಾಲಿಗರಾಗಿದ್ದು, ಕುಟುಂಬದ ಏಕೈಕ ಆಧಾರವಾಗಿದ್ದರು. ಮಯೂರ್ ಯಾವುದೇ ರೀತಿಯ ದುರಭ್ಯಾಸ ಇರಲಿಲ್ಲ. ಆರೋಗ್ಯವಾಗಿಯೇ ಇದ್ದರು. ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ಅವರ ಸಂಬಂಧಿಕರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...