
ಪ್ರಧಾನಿ ನರೇಂದ್ರ ಮೋದಿಯವರು ಗೋಡ್ಸೆಯನ್ನು ದೇವರಂತೆ ಕಾಣುತ್ತಾರೆ ಎಂದು ಟ್ವೀಟ್ ಮಾಡಿದ್ದ ಗುಜರಾತಿನ ವಡಗಾಂವ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಕ್ರಾಜರ್ ಜಿಲ್ಲೆಯ ಭವಾನಿಪುರ ನಿವಾಸಿ ಅನುಪ್ ಕುಮಾರ್ ಡೇ ಎಂಬವರು ನೀಡಿದ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಜಿಗ್ನೇಶ್ ಮೇವಾನಿಯವರು ಬನಸ್ಕಂತ್ ನ ಪಲನ್ಪೂರ್ ಸರ್ಕಿಟ್ ಹೌಸ್ ನಲ್ಲಿ ಇದ್ದ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಪೊಲೀಸರು ಯಾವುದೇ ದಾಖಲೆ ಪತ್ರಗಳನ್ನು ನೀಡಲಿಲ್ಲ ಎಂದು ಜಿಗ್ನೇಶ್ ಮೇವಾನಿ ಅವರ ಸಹವರ್ತಿಗಳು ಆರೋಪಿಸಿದ್ದಾರೆ.
ಎಲೆಕ್ಟ್ರಿಕ್ ವಾಹನ ಹೊಂದಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’
ಜಿಗ್ನೇಶ್ ಮೇವಾನಿಯವರು ಮಾಡಿರುವ ಟ್ವೀಟ್ ನಿಂದಾಗಿ ಸಮಾಜದ ಸಾಮರಸ್ಯ ಹಾಳಾಗುತ್ತದೆ. ಅಲ್ಲದೆ ಕೋಮುಗಳ ನಡುವೆ ಸಂಘರ್ಷವನ್ನು ಉಂಟುಮಾಡುತ್ತದೆ ಎಂದು ಅನುಪ್ ಕುಮಾರ್ ಡೇ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜಿಗ್ನೇಶ್ ಮೇವಾನಿಯವರು ಮಾಡಿದ್ದ ಎರಡು ಟ್ವೀಟ್ ಗಳನ್ನು ಟ್ವಿಟರ್ ಸಹ ಹಿಂಪಡೆದುಕೊಂಡಿದ್ದು, ಕಾನೂನು ಕ್ರಮಕ್ಕೆ ಕೇಳಿಬಂದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದೆ.