ಕೊರೊನಾ ಸೋಂಕು ಹರಡುವುದನ್ನು ತಡೆಯಲು ಗುಜರಾತ್ ಸರ್ಕಾರ ಸೋಮವಾರ ರಾಜ್ಯದ ನಾಲ್ಕು ಪ್ರಮುಖ ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿದೆ.
ಅಹಮದಾಬಾದ್, ಸೂರತ್, ವಡೋದರ ಮತ್ತು ರಾಜಕೋಟ್ ಗಳಲ್ಲಿ ವಿಧಿಸಲಾಗಿರುವ ನೈಟ್ ಕರ್ಫ್ಯೂವವನ್ನು ಫೆಬ್ರವರಿ 28 ರ ವರೆಗೆ ವಿಸ್ತರಿಸುವುದಾಗಿ ಸೋಮವಾರ ಘೋಷಿಸಲಾಗಿದೆ. ನೈಟ್ ಕರ್ಫ್ಯೂ ಅವಧಿಯನ್ನು ಒಂದು ಗಂಟೆ ಕಡಿತಗೊಳಿಸಲಾಗಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯ ಬದಲಿಗೆ ರಾತ್ರಿ 12 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಫೆಬ್ರವರಿ 16 ರಿಂದ 28 ರವರೆಗೆ ಗುಜರಾತ್ ನ ನಾಲ್ಕು ಮೆಟ್ರೋ ನಗರಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಿಸಲಾಗಿದೆ ಎಂದು ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಪಂಕಜ್ ಕುಮಾರ್ ತಿಳಿಸಿದ್ದಾರೆ.