
ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಖ್ಯಾತ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರಿಗೆ ಟಿಕೆಟ್ ನೀಡಲಾಗಿದೆ.
ಹಾಗೆಯೇ ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರಿಗೂ ಸಹ ಬಿಜೆಪಿ ಅವಕಾಶ ಕಲ್ಪಿಸಿಕೊಟ್ಟಿದೆ.
ಬಿಜೆಪಿಯ ಪಟ್ಟಿಯಲ್ಲಿ ಬಹುತೇಕ ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಇದು ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.