ರಾಜಕೋಟ್: ಗುಜರಾತ್ ನ ರಾಜಕೋಟ್ ನಲ್ಲಿ ಸ್ಪಾ ಸೆಂಟರ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಮೂವರು ಯುವತಿಯರನ್ನು ರಕ್ಷಿಸಲಾಗಿದೆ.
ರಾಜಕೋಟ್ ನ ಮಾವಾಡಿ ರಸ್ತೆಯ ನ್ಯೂ ಜಲರಾಂ ಸೊಸೈಟಿ ಸಮೀಪದ ಸ್ಪಾ ಸೆಂಟರ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದು, ದೆಹಲಿ, ರಾಜಸ್ಥಾನ, ಮಣಿಪುರದಿಂದ ಯುವತಿಯರನ್ನು ಕರೆದುಕೊಂಡು ಬರಲಾಗಿತ್ತು.
ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಯುವಕನೊಬ್ಬನನ್ನು ಬಂಧಿಸಲಾಗಿದ್ದು, ಹೊರ ರಾಜ್ಯದ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪೆನ್ ರಾವಲ್ ಎಂಬುವನನ್ನು ಬಂಧಿಸಲಾಗಿದ್ದು, ಮತ್ತೊಬ್ಬನ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಸಬ್ ಇನ್ಸ್ ಪೆಕ್ಟರ್ ಎಂ.ಎನ್. ಅನ್ಸಾರಿ ತಿಳಿಸಿದ್ದಾರೆ. ಆರೋಪಿಗಳು ಪ್ರತಿ ಗ್ರಾಹಕನಿಂದ 2300 ರೂಪಾಯಿ ಪಡೆದು ತಮ್ಮ ಪಾಲು ಕಡಿತಗೊಳಿಸಿಕೊಂಡು ಲೈಂಗಿಕ ಕಾರ್ಯಕರ್ತೆಯರಿಗೆ 1500 ರೂ. ಕೊಡುತ್ತಿದ್ದರು ಎನ್ನಲಾಗಿದೆ.