ಗುಜರಾತ್ನ ಆನಂದ್ ಜಿಲ್ಲೆಯ ವಡೋದರಾ – ಅಹಮದಾಬಾದ್ ಎಕ್ಸ್ಪ್ರೆಸ್ ವೇನಲ್ಲಿ ಚಲಿಸುತ್ತಿದ್ದ ಟ್ರಕ್ಗಳು ಹಾಗೂ ಕಾರುಗಳ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ಎಸೆದಿದ್ದು ಪರಿಣಾಮವಾಗಿ ಏಳು ವಾಹನಗಳು ಜಖಂಗೊಂಡಿವೆಎಂದು ಮಾಹಿತಿ ನೀಡಿದ್ದಾರೆ.
ಮೂರು ಟ್ರಕ್ಗಳು ಹಾಗೂ ನಾಲ್ಕು ಕಾರುಗಳ ಕಿಟಕಿ ಗಾಜುಗಳು ಒಡೆದು ಹೋಗಿದೆ. ಮಂಗಳವಾರ ಮಧ್ಯರಾತ್ರಿ ವೇಳೆಗೆ ದುಷ್ಕರ್ಮಿಗಳು ಪರಿಸ್ಥಿತಿಯ ಲಾಭ ಪಡೆದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆಯಿಂದ ಯಾವುದೇ ಪ್ರಯಾಣಿಕರಿಗೆ ಹಾನಿ ಉಂಟಾಗಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಸಮರ್ಖ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಈ ಸಂಬಂಧ ಮೂವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೂವರು ಅಪರಿಚಿತರ ವಿರುದ್ಧ ಸೆಕ್ಷನ್ 308 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ 11 ಗಂಟೆ ಸುಮಾರಿಗೆ ಎಕ್ಸ್ಪ್ರೆಸ್ ವೇನಲ್ಲಿ ಅಹಮದಾಬಾದ್ ಕಡೆಗೆ ಹೊರಟಿದ್ದ ವಾಹನಗಳ ಮೇಲೆ ಈ ಕಲ್ಲು ತೂರಾಟ ನಡೆದಿದೆ. ಮೂರು ಟ್ರಕ್ಗಳು ಸೇರಿದಂಗೆ ಏಳು ವಾಹನಗಳು ಹಾನಿಗೊಳಗಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ರು.