alex Certify ಚಲಿಸುತ್ತಿದ್ದ ವಾಹನಗಳ ಮೇಲೆ ಅಪರಿಚಿತರಿಂದ ಕಲ್ಲು ತೂರಾಟ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ವಾಹನಗಳ ಮೇಲೆ ಅಪರಿಚಿತರಿಂದ ಕಲ್ಲು ತೂರಾಟ…..!

ಗುಜರಾತ್​​ನ ಆನಂದ್​ ಜಿಲ್ಲೆಯ ವಡೋದರಾ – ಅಹಮದಾಬಾದ್​ ಎಕ್ಸ್​ಪ್ರೆಸ್​ ವೇನಲ್ಲಿ ಚಲಿಸುತ್ತಿದ್ದ ಟ್ರಕ್​ಗಳು ಹಾಗೂ ಕಾರುಗಳ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ಎಸೆದಿದ್ದು ಪರಿಣಾಮವಾಗಿ ಏಳು ವಾಹನಗಳು ಜಖಂಗೊಂಡಿವೆಎಂದು ಮಾಹಿತಿ ನೀಡಿದ್ದಾರೆ.

ಮೂರು ಟ್ರಕ್​ಗಳು ಹಾಗೂ ನಾಲ್ಕು ಕಾರುಗಳ ಕಿಟಕಿ ಗಾಜುಗಳು ಒಡೆದು ಹೋಗಿದೆ. ಮಂಗಳವಾರ ಮಧ್ಯರಾತ್ರಿ ವೇಳೆಗೆ ದುಷ್ಕರ್ಮಿಗಳು ಪರಿಸ್ಥಿತಿಯ ಲಾಭ ಪಡೆದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯಿಂದ ಯಾವುದೇ ಪ್ರಯಾಣಿಕರಿಗೆ ಹಾನಿ ಉಂಟಾಗಿಲ್ಲ ಎಂದು ಪೊಲೀಸ್​ ಅಧಿಕಾರಿ ಹೇಳಿದ್ದಾರೆ. ಸಮರ್ಖ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಈ ಸಂಬಂಧ ಮೂವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಮೂವರು ಅಪರಿಚಿತರ ವಿರುದ್ಧ ಸೆಕ್ಷನ್​ 308 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ 11 ಗಂಟೆ ಸುಮಾರಿಗೆ ಎಕ್ಸ್​ಪ್ರೆಸ್​ ವೇನಲ್ಲಿ ಅಹಮದಾಬಾದ್​ ಕಡೆಗೆ ಹೊರಟಿದ್ದ ವಾಹನಗಳ ಮೇಲೆ ಈ ಕಲ್ಲು ತೂರಾಟ ನಡೆದಿದೆ. ಮೂರು ಟ್ರಕ್​ಗಳು ಸೇರಿದಂಗೆ ಏಳು ವಾಹನಗಳು ಹಾನಿಗೊಳಗಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...